
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸತ್ಯೇಂದ್ರ ಜೈನ್ ಪ್ರಸ್ತುತ ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ವೈದ್ಯಕೀಯ ಪರಿಸ್ಥಿತಿಯನ್ನು ಆಧರಿಸಿ ಜಾಮೀನು ನೀಡಲಾಗಿದೆ.
ಜೈಲಿನ ಬಾತ್ರೂಮಿನಲ್ಲಿ ಕಾಲು ಜಾರಿ ಬಿದ್ದಿದ್ದ ಸತ್ಯೇಂದ್ರ ಜೈನ್ ತೀವ್ರ ಅಸ್ವಸ್ಥಗೊಂಡಿದ್ದರು. ಅಲ್ಲದೆ ತಮಗೆ ಮನೆ ಆಹಾರ ನಿರಾಕರಿಸಿರುವ ಕಾರಣ ಆರೋಗ್ಯದಲ್ಲಿ ವ್ಯತ್ಯಯವಾಗಿದೆ ಎಂದು ಈ ಹಿಂದೆ ಆರೋಪಿಸಿದ್ದರು.

