ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ವಾಣಿಜ್ಯ ನಗರಿ ಮುಂಬೈನಲ್ಲಿನ ಬಿಬಿಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಬೆಳಿಗ್ಗೆ ಕಚೇರಿ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಬಿಸಿ ಸಿಬ್ಬಂದಿಯ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಅಲ್ಲದೆ ಹಲವು ಸಿಬ್ಬಂದಿಗಳನ್ನು ಮನೆಗೆ ತೆರಳುವಂತೆ ಸೂಚಿಸಲಾಗಿದ್ದು, ಹಿರಿಯ ಅಧಿಕಾರಿಗಳಿಂದ ಕಡತಗಳನ್ನು ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Income Tax department is also conducting survey at the BBC office in Mumbai, as per sources. https://t.co/2C9pXlkHBQ
— ANI (@ANI) February 14, 2023