HomeKarnatakaBIG BREAKING: ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಶ್ರೀರಾಮುಲುಗೆ ಸೋಲು

BIG BREAKING: ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಶ್ರೀರಾಮುಲುಗೆ ಸೋಲು

ಏಳು ಹಂತಗಳಲ್ಲಿ ನಡೆದಿದ್ದ ಈ ಬಾರಿಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಒಂದೊಂದೇ ಕ್ಷೇತ್ರಗಳ ಫಲಿತಾಂಶ ಹೊರಬೀಳತೊಡಗಿದೆ. ಕರ್ನಾಟಕದಲ್ಲಿ ಬಿಜೆಪಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮೈತ್ರಿ ಕೂಟ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ.

ಇದರ ಮಧ್ಯೆ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಸಚಿವ ಶ್ರೀರಾಮುಲು ಅವರು ಸೋಲನ್ನಪ್ಪಿದ್ದು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಇ. ತುಕಾರಾಂ ಜಯಭೇರಿ ಬಾರಿಸಿದ್ದಾರೆ.

ಅಧಿಕೃತ ಫಲಿತಾಂಶ ಮಾತ್ರ ಘೋಷಣೆಯಾಗಬೇಕಿದ್ದು, ವಿಧಾನಸಭಾ ಚುನಾವಣೆ ಬಳಿಕ ಲೋಕಸಭಾ ಚುನಾವಣೆಯಲ್ಲೂ ಶ್ರೀರಾಮುಲು ಸೋಲನ್ನಪ್ಪಿ, ತೀವ್ರ ಮುಖಭಂಗ ಅನುಭವಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular