HomeKarnatakaBIG BREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೊಮ್ಮಾಯಿ; ಬೆಂಗಳೂರಿನತ್ತ ಪಯಣ

BIG BREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೊಮ್ಮಾಯಿ; ಬೆಂಗಳೂರಿನತ್ತ ಪಯಣ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು, ಕಾಂಗ್ರೆಸ್ ಭರ್ಜರಿ ಗೆಲುವಿನ ನಗೆ ಬೀರಿದೆ. ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲು ಕಾಂಗ್ರೆಸ್ ಸಜ್ಜಾಗಿದ್ದು, ಈಗಾಗಲೇ ಪೂರಕ ಸಿದ್ಧತೆಗಳು ನಡೆಯುತ್ತಿವೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದು, ಇದೀಗ ಕಾಂಗ್ರೆಸ್ ಗೆ ಬಹುಮತ ಲಭಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾವೇರಿಯಿಂದ ಬೆಂಗಳೂರಿಗೆ ತೆರಳಲು ಸಿದ್ದರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular