BIG BREAKING: ‘ಸಿದ್ದರಾಮಯ್ಯ ಎಂಬ ಹೆಸರಿನವನಾದ ನಾನು’; ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದು ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿಗೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಬೋಧಿಸಿದ್ದು, ಈ ಪ್ರತಿಜ್ಞಾವಿಧಿ ಸಮಾರಂಭಕ್ಕೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಮಂದಿ ಆಗಮಿಸಿದ್ದರು. ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪ್ರಮಾಣವಚನ ಸ್ವೀಕಾರದ ವೇಳೆ ‘ಸಿದ್ದರಾಮಯ್ಯ ಎಂಬ ಹೆಸರಿನವನಾದ ನಾನು’ ಎಂದು ಹೇಳುತ್ತಿದ್ದಂತೆಯೇ ಸಿದ್ದು ಅಭಿಮಾನಿಗಳು ಜಯಘೋಷ ಮೊಳಗಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಸೇರಿದಂತೆ ಖ್ಯಾತ ನಟ ಕಮಲಹಾಸನ್, ದುನಿಯಾ ವಿಜಯ್ ಮೊದಲಾದವರು ಹಾಜರಿದ್ದರು.

ಇಂದು ಸಂಜೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕ್ಯಾಬಿನೆಟ್ ನ ಪ್ರಥಮ ಸಭೆ ನಡೆಯಲಿದ್ದು, ಈ ವೇಳೆ ರಾಜ್ಯದ ಜನರಿಗೆ ನೀಡಿದ್ದ ಭರವಸೆಯಂತೆ ಉಚಿತ ವಿದ್ಯುತ್, ಗೃಹಿಣಿಯರಿಗೆ 2000 ರೂಪಾಯಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read