BIG BREAKING: ಸಿದ್ದರಾಮಯ್ಯ – ಡಿಕೆಶಿ ಜೊತೆ ಲಕ್ಷ್ಮಣ ಸವದಿ ಯಶಸ್ವಿ ಮಾತುಕತೆ; ಸಂಜೆ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತ ಸೇರ್ಪಡೆ

ಮಹತ್ವದ ಬೆಳವಣಿಗೆಯಲ್ಲಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗುವುದಕ್ಕೆ ಸಮ್ಮತಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆಗೆ ಮಾತುಕತೆ ಯಶಸ್ವಿಯಾಗಿದ್ದು ಬಳಿಕ ಡಿ.ಕೆ. ಶಿವಕುಮಾರ್ ಈ ವಿಚಾರ ಪ್ರಕಟಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಜೊತೆ ಒಂದೇ ಕಾರಿನಲ್ಲಿ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಲಕ್ಷ್ಮಣ ಸವದಿ ಮಾತುಕತೆ ನಡೆಸಿದ್ದು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಯಾವುದೇ ಷರತ್ತುಗಳಿಲ್ಲದೆ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದರು.

ಸಂಜೆ 4:30 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಶಿವಕುಮಾರ್ ಹೇಳಿದ್ದು, ಆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಎಲ್ಲ ಪ್ರಶ್ನೆಗೂ ಉತ್ತರಿಸುವುದಾಗಿ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read