BIG BREAKING : ಪಾಕಿಸ್ತಾನದಲ್ಲಿ ಭೀಕರ ರೈಲು ಅಪಘಾತ : 15 ಮಂದಿ ಸಾವು, 50 ಕ್ಕೂ ಹೆಚ್ಚು ಜನರಿಗೆ ಗಾಯ

ಕರಾಚಿ : ಪಾಕಿಸ್ತಾನದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಎಕ್ಸ್ ಪ್ರೆಸ್ ರೈಲಿನ 10 ಬೋಗಿಗಳು ಹಳಿ ತಪ್ಪಿದ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ರಾವಲ್ಪಿಂಡಿಯಿಂದ ಚಲಿಸುವ ಹಜಾರಾ ಎಕ್ಸ್ಪ್ರೆಸ್ನ ಹತ್ತು ಬೋಗಿಗಳು ಹಳಿ ತಪ್ಪಿವೆ. ಈ ಅಪಘಾತದಲ್ಲಿ ಈವರೆಗೆ 15 ಜನರು ಸಾವನ್ನಪ್ಪಿದ್ದಾರೆ. ಸುಮಾರು 50 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಹಾರಾ ರೈಲ್ವೆ ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ಈ ನಿಲ್ದಾಣವು ಶಹಜಾದ್ಪುರ ಮತ್ತು ನವಾಬ್ಷಾ ನಡುವೆ ಇದೆ.

ಅಪಘಾತದಲ್ಲಿ ಗಾಯಗೊಂಡವರನ್ನು ನವಾಬ್ ಷಾದ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲು ಹಳಿ ತಪ್ಪಲು ಕಾರಣ ಇನ್ನೂ ತಿಳಿದುಬಂದಿಲ್ಲ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.  10 ಬೋಗಿಗಳು ಹಳಿ ತಪ್ಪಿವೆ ಎಂದು ಪಾಕಿಸ್ತಾನ ರೈಲ್ವೆ ವಿಭಾಗೀಯ ಅಧೀಕ್ಷಕ ಸುಕುರ್ ಮೊಹಮ್ಮದ್ ರೆಹಮಾನ್ ಅವರನ್ನು ಉಲ್ಲೇಖಿಸಿ ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಪೀಡಿತ ಬೋಗಿಗಳಿಂದ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read