BIG BREAKING : ಪಾಕಿಸ್ತಾನದಲ್ಲಿ ಮತ್ತೆ ಬಾಂಬ್ ಸ್ಪೋಟ : 7 ಮಂದಿ ಸಾವು, ಹಲವರಿಗೆ ಗಾಯ

ಕರಾಚಿ : ಪಾಕಿಸ್ತಾನದಲ್ಲಿ ಮತ್ತೆ ಬಾಂಬ್ ಸ್ಪೋಟವಾಗಿದ್ದು, ರಾಜಕಾರಣಿ ಸೇರಿದಂತೆ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೈಋತ್ಯ ಪಾಕಿಸ್ತಾನದಲ್ಲಿ ನಡೆದಿದೆ.

ನೈಋತ್ಯ ಪಾಕಿಸ್ತಾನದಲ್ಲಿ ಸ್ಥಳೀಯ ರಾಜಕಾರಣಿ ಮತ್ತು ಅವರ ಸ್ನೇಹಿತರನ್ನು ಕರೆದೊಯ್ಯುತ್ತಿದ್ದ ವಾಹನಕ್ಕೆ ರಸ್ತೆಬದಿಯಲ್ಲಿ ಬಾಂಬ್ ಸ್ಪೋಟಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಬಲೂಚಿಸ್ತಾನ ಪ್ರಾಂತ್ಯದ ಕೆಚ್ ಎಂಬ ಪಟ್ಟಣದಲ್ಲಿ ಸೋಮವಾರ ಏಳು ಜನರ ಸಾವಿಗೆ ಕಾರಣವಾದ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಹೈದರ್ ಅಲಿ ತಿಳಿಸಿದ್ದಾರೆ.

ಹತ್ಯೆಗೀಡಾದ ರಾಜಕಾರಣಿ ಇಶಾಕ್ ಯಾಕೂಬ್ ಬಲೂಚಿಸ್ತಾನ್ ಅವಾಮಿ ಪಕ್ಷಕ್ಕೆ ಸೇರಿದವನಾಗಿದ್ದು, ದಾಳಿಯ ಹಿಂದೆ ಯಾರು ಇದ್ದಾರೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಅಲಿ ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read