BIG BREAKING: ಇರಾನ್ –ಇಸ್ರೇಲ್ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿ: ಜಗತ್ತಿಗೇ ಎದುರಾಯ್ತು 3ನೇ ಮಹಾಯುದ್ಧದ ಆತಂಕ

ಇಸ್ರೇಲ್ –ಇರಾನ್ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿ ಕೊಟ್ಟಿದೆ. ಇರಾನ್ ಪರಮಾಣು ತಾಣಗಳ ಮೇಲೆ ಅಮೆರಿಕ ದಾಳಿ ನಡೆಸಿದೆ.

ನಟಾಂಜ್, ಫೋರ್ಡೋ, ಎಸ್ಪಹಾನ್ ಮೇಲೆ ಅಮೆರಿಕ ದಾಳಿ ನಡೆಸಿದೆ. ಅಣುಬಾಂಬ್ ಕದನ ಮೂರನೇ ವಿಶ್ವ ಯುದ್ಧಕ್ಕೆ ನಾಂದಿ ಹಾಡಿದಂತಾಗಿದೆ. ಇರಾನ್ –ಇಸ್ರೇಲ್ ನಡುವಿನ ಯುದ್ಧಕ್ಕೆ ಅಮೆರಿಕದ ಎಂಟ್ರಿ ಬೆನ್ನಲ್ಲೇ ಜಗತ್ತಿಗೆ ಆತಂಕ ಶುರುವಾಗಿದೆ.

ದಶ ದಿಕ್ಕುಗಳಿಂದಲೂ ಇರಾನ್ ದೇಶವನ್ನು ಅಮೆರಿಕ ಸುತ್ತುವರೆದಿದೆ. ತಡರಾತ್ರಿ ಮೂರು ಪರಮಾಣು ಘಟಕಗಳ ಮೇಲಿನ ದಾಳಿ ನಡೆಸಿರುವುದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ.

ಇರಾನ್‌ನಲ್ಲಿರುವ ಮೂರು ಪರಮಾಣು ತಾಣಗಳ ಮೇಲೆ ಅಮೆರಿಕ ಬಾಂಬ್ ದಾಳಿ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ನಾವು ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ಕೇಂದ್ರಗಳ ಮೇಲೆ ನಮ್ಮ ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ.

ಎಲ್ಲಾ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಇವೆ. ಬಾಂಬ್‌ಗಳ ಸಂಪೂರ್ಣ ಪೇಲೋಡ್ ಅನ್ನು ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಬೀಳಿಸಲಾಯಿತು. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ತಮ್ಮ ನೆಲೆಗೆ ಹೋಗುತ್ತಿವೆ.

ನಮ್ಮ ಮಹಾನ್ ಅಮೇರಿಕನ್ ಯೋಧರಿಗೆ ಅಭಿನಂದನೆಗಳು. ಜಗತ್ತಿನಲ್ಲಿ ಬೇರೆ ಯಾವುದೇ ಸೈನ್ಯವು ಇದನ್ನು ಮಾಡಲು ಸಾಧ್ಯವಿಲ್ಲ. ಈಗ ಶಾಂತಿಯ ಸಮಯ! ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು ಎಂದು ಟ್ರಂಪ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read