BIG BREAKING : ‘Axiom Mission 4’ ಸಕ್ಸಸ್ : ಯಶಸ್ವಿಯಾಗಿ ಭೂಮಿಗೆ ಬಂದಿಳಿದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾನಿಗಳು |WATCH VIDEO

ಡಿಜಿಟಲ್ ಡೆಸ್ಕ್ : ಆ್ಯಕ್ಸಿಯಮ್ ಯೋಜನೆ ಸಕ್ಸಸ್ ಆಗಿದ್ದು, ಯಶಸ್ವಿಯಾಗಿ ಗಗನಯಾನಿಗಳು ಭೂಮಿಗೆ ಬಂದಿಳಿದಿದ್ದಾರೆ.

18 ದಿನಗಳ ಬಾಹ್ಯಾಕಾಶ ಯಾನ ಮುಗಿಸಿ ಭಾರತೀಯ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾನಿಗಳು ಭೂಮಿಗೆ ಬಂದಿಳಿದಿದ್ದಾರೆ. ಮಧ್ಯಾಹ್ನ 3 ಗಂಟೆ 2 ನಿಮಿಷಕ್ಕೆ ಕ್ಯಾಲಿಫೋರ್ನಿಯಾದ ಕರಾವಳಿ ಪ್ರದೇಶಕ್ಕೆ ನೌಕೆ ಬಂದಿಳಿದಿದೆ.

ಹೌದು, ಭಾರತೀಯ ಗ್ರೂಪ್ ಕ್ಯಾ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ ನ ಮಿಷನ್ ಸ್ಪೆಷಲಿಸ್ಟ್ ಸ್ಲಾವೋಸ್ಜ್ ಉಜ್ನಾನ್ಸ್ಕಿ, ಹಂಗೇರಿಯಾದ ಗಗನಯಾನಿ ಟಿಬೋರ್ ಕಾಪು ಅವರು ಭೂಮಿ ಮೇಲೆ ಲ್ಯಾಂಡ್ ಆಗಿದ್ದಾರೆ. ಜೂನ್ 25 ರಂದು ಪ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಾಲ್ವರು ಐಎಸ್ಎಸ್ಗೆ ಪ್ರಯಾಣ ಬೆಳೆಸಿದ್ದರು. ವಿಶೇಷವಾಗಿ 25 ವರ್ಷಗಳಷ್ಟು ಹಳೆಯದಾದ ಸೂಕ್ಷ್ಮ ಗುರುತ್ವಾಕರ್ಷಣ ಪ್ರಯೋಗಾಲಯದಲ್ಲಿ ಪಾದಾರ್ಪಣೆ ಮಾಡಿದ ಭಾರತಕ್ಕೆ ಇದು ಮಹತ್ವದ್ದಾಗಿದೆ.

ನಾಲ್ವರು ಸ್ಟೆಮ್ ಸೆಲ್, ಬಾಹ್ಯಾಕಾಶದಲ್ಲಿ ಮನುಷ್ಯರ ಮೂಳೆ ಸವೆತ, ಗಿಡಗಳನ್ನು ಬೆಳೆಯುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಂಶೋಧನೆ, ಅಧ್ಯಯನ ನಡೆಸಿದ್ದಾರೆ. ಇತ್ತೀಚೆಗೆ ಬಾಹ್ಯಾಕಾಶಕ್ಕೆ ತೆರಳಿದ್ದ ಅಮೆರಿಕಾದ ಸುನಿತಾ ವಿಲಿಯಮ್ಸ್ ಸೇರಿದಂತೆ ನಾಲ್ವರು ಗಗನಯಾನಿಗಳು ಅಮೆರಿಕಾದ ಸಮುದ್ರದಲ್ಲಿ ಲ್ಯಾಂಡ್ ಆಗಿದ್ದರು. ಅದೇ ರೀತಿ ಈಗ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಲ್ಯಾಂಡ್ ಆಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read