HomeKarnatakaBIG BREAKING : ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ |B.Nagendra Resigned

BIG BREAKING : ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ |B.Nagendra Resigned

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರಾಜೀನಾಮೆ ನೀಡಲ್ಲ , ನಾನೇನೂ ತಪ್ಪು ಮಾಡಿಲ್ಲ ಎನ್ನುತ್ತಿದ್ದ ಬಿ.ನಾಗೇಂದ್ರ ಹೈಕಮಾಂಡ್ ಸೂಚನೆಯಂತೆ ಕೊನೆಗೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ವಾಲ್ಮೀಕಿ ನಿಗಮದ ಖಾತೆಗಳಿಂದ ಕೋಟ್ಯಂತರ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷ ಬಿಜೆಪಿ ಸೇರಿದಂತೆ ವಿವಿಧ ವಲಯಗಳಿಂದ ಒತ್ತಡ ಹೆಚ್ಚಾಗಿತ್ತು.  ನಾಗೇಂದ್ರ ಅವರು ರಾಜೀನಾಮೆ ನೀಡುವ ಮುನ್ನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಬಳಿಕ ತಮ್ಮ ಮೇಲಿನ ಆರೋಪಗಳ ಕುರಿತು ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಕರಣದಲ್ಲಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆಯ ಆರೋಪಗಳು ಗಂಭೀರ ಸ್ವರೂಪ ಪಡೆದಿದ್ದು, ತನಿಖಾ ಸಂಸ್ಥೆಗಳ ಕ್ರಮವೂ ಮುಂದುವರಿದಿದೆ. ರಾಜೀನಾಮೆಯೊಂದಿಗೆ ರಾಜ್ಯ ಸರ್ಕಾರದ ಮೇಲಿನ ರಾಜಕೀಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ.

 ವಾಲ್ಮೀಕಿ ನಿಗಮ ಹಗರಣ

ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ (KMVSTDC) ದಲ್ಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವೇ ವಾಲ್ಮೀಕಿ ನಿಗಮ ಹಗರಣ.2024ರಲ್ಲಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಪ್ರಕರಣ ಬೆಳಕಿಗೆ ಬಂತು. ಅವರು ಬರೆದಿದ್ದ ‘ಡೆತ್ ನೋಟ್’ ನಲ್ಲಿ ಹಣಕಾಸಿನ ಅಕ್ರಮಗಳ ಕುರಿತು ಆರೋಪಗಳಿದ್ದವು.

ತನಿಖಾ ಸಂಸ್ಥೆಗಳ ಪ್ರಕಾರ, ಸುಮಾರು ₹89.63 ಕೋಟಿ ಹಣವನ್ನು ನಕಲಿ ದಾಖಲೆಗಳು, ಚೆಕ್‌ಗಳು ಮತ್ತು RTGS ವಹಿವಾಟುಗಳ ಮೂಲಕ ನಿಗಮದ ಖಾತೆಗಳಿಂದ ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ. ನಂತರ ಹಣವನ್ನು ಸುಮಾರು 600 ಬ್ಯಾಂಕ್ ಖಾತೆಗಳ ಮೂಲಕ ವಿವಿಧ ರೀತಿಯಲ್ಲಿ ವರ್ಗಾಯಿಸಲಾಗಿದೆ ಎಂದು CBI ಆರೋಪಿಸಿದೆ. ಈ ಪ್ರಕರಣದಲ್ಲಿ ಅಂದಿನ ಸಚಿವ ಬಿ. ನಾಗೇಂದ್ರ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿತು. 2024ರಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2024ರ ತನಿಖೆಯಲ್ಲಿ ED ಕೂಡ ಪ್ರಕರಣ ದಾಖಲಿಸಿ, ಹಣ ವರ್ಗಾವಣೆ ಹಾಗೂ ಅಕ್ರಮ ಹಣದ ಬಳಕೆಯ ಕುರಿತು ತನಿಖೆ ನಡೆಸಿತು.

2026ರ ಜೂನ್‌ನಲ್ಲಿ CBI 30 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದು, ಬಿ. ನಾಗೇಂದ್ರ ಅವರನ್ನೂ ಆರೋಪಿಗಳ ಪಟ್ಟಿಯಲ್ಲಿ ಸೇರಿಸಿದೆ. CBI ಪ್ರಕಾರ, ₹89.63 ಕೋಟಿ ಹಣದ ಅಕ್ರಮ ವರ್ಗಾವಣೆಗೆ ಸಂಚು ರೂಪಿಸಲಾಗಿತ್ತು ಎಂಬ ಆರೋಪವಿದೆ.

ಇದೀಗ 2026ರ ಆಗಸ್ಟ್‌ನಲ್ಲಿ ಪ್ರಕರಣ ಮತ್ತೆ ರಾಜಕೀಯವಾಗಿ ಮುನ್ನೆಲೆಗೆ ಬಂದಿದೆ. ಬಿಜೆಪಿ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಭಾರಿ ಪ್ರತಿಭಟನೆ ನಡೆಸಿತ್ತು.ಭಾರಿ, ಪ್ರತಿಭಟನೆ, ಟೀಕೆ ಆರೋಪಗಳ ನಡುವೆ ಹೈಕಮಾಂಡ್ ಸೂಚನೆಯಂತೆ ಕೊನೆಗೂ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular