BIG BREAKING: ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವರ ತಲೆದಂಡ: RCB, KSCA ಪ್ರತಿನಿಧಿಗಳ ಬಂಧನ: ಸಿಎಂ ಸಿದ್ಧರಾಮಯ್ಯ ಮಾಹಿತಿ

ಬೆಂಗಳೂರು: ನಿನ್ನೆ ನಡೆದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದು, 47 ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇದೀಗ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಗುರುವಾರ ಸಂಪುಟ ಸಭೆ ನಡೆಯುತ್ತೆ. ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ನಿನ್ನೆಯ ಘಟನೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಉಳಿದ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ನ್ನೆ ನಡೆದ ಹಿತಕರ ಘಟನೆ ಬಗ್ಗೆ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಗಂಭೀರವಾಗಿ ಚರ್ಚೆ ಮಾಡಲಾಗಿದೆ. ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ತನಿಖೆಗೆ ಏಕ ಸದಸ್ಯ ಆಯೋಗ ರಚಿಸಲಾಗಿದೆ.

ಆರ್‌ಸಿಬಿ, DNA ಇವೆಂಟ್ ಮ್ಯಾನೇಜ್ಮೆಂಟ್, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಮೇಲೆ ಕೇಸ್ ದಾಖಲಿಸಿದ್ದು, ಇವುಗಳನ್ನು ಪ್ರತಿನಿಧಿಸುವವರ ಮೇಲೆ ಕೇಸು ದಾಖಲಿಸಿ, ಬಂಧಿಸಲಾಗುವುದು, ಇವರ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್, ಸ್ಟೇಷನ್ ಹೌಸ್ ಆಫೀಸರ್, ಸೆಂಟ್ರಲ್ DCP, ACP, ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read