BIG BREAKING : ‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ’ ಪರೀಕ್ಷೆಗೆ ದಿನಾಂಕ, ಪರೀಕ್ಷಾ ಕೇಂದ್ರ ಬದಲು : ʻKEAʼ ಆದೇಶ

ಬೆಂಗಳೂರು  :  ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ದಿನಾಂಕ, ಪರೀಕ್ಷಾ ಕೇಂದ್ರ ಬದಲು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶಿಸಿದೆ.  ಹೌದು,  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯಬೇಕಿದ್ದ ಪರೀಕ್ಷಾ ಕೇಂದ್ರವನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಸರ್ಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಕಲಬುರಗಿ ಸೇರಿದಂತೆ ವಿವಿಧೆಡೆ ಅಕ್ರಮಗಳು ನಡೆಯುತ್ತಿರುವ ಹಿನ್ನೆಲೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷಾ ಕೇಂದ್ರಗಳನ್ನು ಬೆಂಗಳೂರಿಗೆ ಶಿಫ್ಟ್ ಮಾಡಿದೆ .ಕಲಬುರ್ಗಿಯಿಂದ ನೇಮಕಾತಿ ಪರೀಕ್ಷೆ ಶಿಫ್ಟ್ ಮಾಡಲಾಗಿದೆ.

ಈಗಾಗಲೇ ಪಿಎಸ್ಐ ಮರು ಪರೀಕ್ಷೆಯನ್ನು ಕೂಡ ಬೆಂಗಳೂರಲ್ಲೇ ನಡೆಸಲು ನಿರ್ಧರಿಸಲಾಗಿದ್ದು, ಇದೀಗ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಪರೀಕ್ಷೆಯು ಕೂಡ ಇದೀಗ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ, ಡಿಸೆಂಬರ್ 31 ರಂದು ನಡೆಯಬೇಕಿದ್ದ ಪರೀಕ್ಷೆಯು ಜನವರಿ 13 ಕ್ಕೆ ಮುಂದೂಡಲಾಗಿದೆ.

ಡಿಸೆಂಬರ್ 31ರ ಬದಲು ಜನವರಿ 13ರಂದು ಪರೀಕ್ಷೆ ನಡೆಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕೆ-ಸೆಟ್ ಪರೀಕ್ಷೆ ಮುಂದೂಡಿದ್ದು, ಜನವರಿ 13ರಂದು ನಡೆಸುವುದಾಗಿ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read