HomeKarnatakaBIG BREAKING : ಮಂಡ್ಯದಲ್ಲಿ ನಾಲೆಗೆ ಕಾರು ಉರುಳಿ ಬಿದ್ದು ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು!

BIG BREAKING : ಮಂಡ್ಯದಲ್ಲಿ ನಾಲೆಗೆ ಕಾರು ಉರುಳಿ ಬಿದ್ದು ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು!

ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಾಲೆಗೆ ಕಾರು ಉರುಳಿ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಶಾಲಾ ನಾಲೆಯಲ್ಲಿ ಕಾರು ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಪೈಕಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಮೃತ ಮಹಿಳೆಯರನ್ನು ಟಿ. ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕಾರದ ರೇಖಾ, ಸಂಜನಾ, ಮಹದೇವಿ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಮನಹಳ್ಳಿ ಗ್ರಾಮದ ಹೊರವಲಯದ ತುರಗನೂರು ಶಾಖಾ ನಾಲೆ ಬಳಿಯ ತಿರುವಿನಲ್ಲಿ ಕಾರು ಕಬ್ಬಿಣದ ತಡೆಗೊಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲೆಗೆ ಕಾರು ಬಿದ್ದಿದೆ. ಈ ವೇಳೆ ಚಾಲಕ ಮನೋಜ್ ಅದೃಷ್ಟವಶಾತ್ ಈಜಿ ದಡ ಸೇರಿದ್ದು, ಉಳಿದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ನಾಲೆಯಿಂದ ನಾಲ್ವರು ಮಹಿಳೆಯರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular