ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ವಿವಿಧ ಇಲಾಖೆಗಳ 56 ಸಾವಿರ ಖಾಲಿ ಹುದ್ದೆಗಳ ನೇಮಕಾತಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಖಾಲಿ ಹುದ್ದೆಗಳ ನೇಮಕಾತಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದ್ದು, ನೇಮಕಾತಿಗಾಗಿ ರಾಜ್ಯ ಸರ್ಕಾರ ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ.
ಖಾಲಿ ಹುದ್ದೆಗಳ ನೇಮಕಾತಿಗೆ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದ್ದು, ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಪರಿಹಾರವನ್ನು ರಾಜ್ಯ ಸರ್ಕಾರ ಕಂಡುಕೊಂಡಿದೆ. ಶೇಕಡ 15 ರಷ್ಟು ಎಸ್‌ಸಿ ಮೀಸಲಾತಿಗೆ ಒಳ ಮೀಸಲು ನೀಡಿ ನೇಮಕಾತಿಗೆ ತೀರ್ಮಾನ ಕೈಗೊಳ್ಳಲಾಗಿದೆ. ಮೀಸಲಾತಿಯ ಮಿತಿಯನ್ನು ಶೇಕಡ 50ರಷ್ಟು ಮೀರದಂತೆ ಒಳ ಮೀಸಲಾತಿಯೊಂದಿಗೆ ನೇಮಕಾತಿ ನಡೆಸಲಾಗುವುದು.
ಎಸ್‌ಸಿ ಒಳ ಮೀಸಲಾತಿ ಶೇಕಡ 17ರಷ್ಟು ಇಟ್ಟು ತಕ್ಷಣ ನೇಮಕಾತಿ ಅಸಾಧ್ಯ. ಶೇಕಡ 17ರಷ್ಟು ಮೀಸಲಾತಿ ಜಾರಿಗೆ ಕಾನೂನು ಹೋರಾಟಕ್ಕೆ ಸರ್ಕಾರ ಮುಂದಾಗಬೇಕು. ಪರಿಶಿಷ್ಟ ಮೀಸಲಾತಿ ಜಾರಿಗೆ ಕಾನೂನು ಹೋರಾಟಕ್ಕೆ ಸರ್ಕಾರ ಮುಂದಾಗಬೇಕು. ರಾಜ್ಯಪಾಲರು ಒಳ ಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿದ್ದರೂ ರಾಜ್ಯ ಸರ್ಕಾರ ಕಾನೂನು ಸಂಘರ್ಷ ಮುಂದುವರಿಸಬೇಕಿದೆ. ಹೀಗಾಗಿ ಹಳೆಯ ಸೂತ್ರದ ಅನ್ವಯ ಸರ್ಕಾರ ನೇಮಕಾತಿಗೆ ಮುಂದಾಗಿದೆ ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ತುಂಬದ ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು. ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿ ಸಮೂಹ ಪ್ರತಿಭಟನೆ ನಡೆಸಿ ವರ್ಷಗಳಿಂದ ಭರ್ತಿಯಾಗದೆ ಉಳಿದ ಖಾಲಿ ಹುದ್ದೆಗಳನ್ನು ತುಂಬಬೇಕೆಂದು ಆಗ್ರಹಿಸಿದ್ದರು. ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಇದೀಗ 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ.

