ನವದೆಹಲಿ: ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲು ಭಾರತೀಯ ಸೇನೆಗೆ ಕೇಂದ್ರ ಸರ್ಕಾರ ಸಂಪೂರ್ಣ ಅಧಿಕಾರ ನೀಡಿದೆ. ಉಗ್ರರ ವಿರುದ್ಧ ಪ್ರತೀಕಾರದಲ್ಲಿ ಸೇನೆಗೆ ಮುಕ್ತ ಅಧಿಕಾರ ನೀಡಲು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆ ನಿರ್ಧಾರ ಕೈಗೊಂಡಿದೆ.
ಭಾರತೀಯ ಸೇನೆಗೆ ನೀವು ಯಾವ ರೀತಿ ಪ್ರತಿಕ್ರಿಯೆ ನೀಡಬೇಕು ಎಂಬುದನ್ನು ನೀವೇ ತಕ್ಷಣಕ್ಕೆ ನಿರ್ಧರಿಸಿ ಕಾರ್ಯರೂಪಕ್ಕೆ ತನ್ನಿ ಎಂದು ಸೇನಾಧಿಕಾರಿಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.
ಉಗ್ರರ ವಿರುದ್ಧ ಯಾವ ರೀತಿ ಉತ್ತರ ಕೊಡಬೇಕು ಎಂಬುದನ್ನು ಸೇನೆಗೆ ನಿರ್ಧರಿಸಲಿ. ಟಾರ್ಗೆಟ್, ಸಮಯವನ್ನು ನಿರ್ಧರಿಸಿ ಪಾಕಿಸ್ತಾನಕ್ಕೆ ಹೇಗೆ ಉತ್ತರ ಕೊಡಬೇಕು ಎಂಬುದನ್ನು ಸೇನೆ ತೀರ್ಮಾನಿಸಲಿ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಭಯೋತ್ಪಾದನೆಗೆ ಹೀನಾಯ ಹೊಡೆತ ನೀಡುವುದು ನಮ್ಮ ರಾಷ್ಟ್ರೀಯ ಸಂಕಲ್ಪ ಎಂದು ಪ್ರಧಾನಿ ನರೇಂದ್ರ ಮೋದಿ ದೃಢಪಡಿಸಿದರು. ಭಾರತೀಯ ಸಶಸ್ತ್ರ ಪಡೆಗಳ ವೃತ್ತಿಪರ ಸಾಮರ್ಥ್ಯಗಳಲ್ಲಿ ಪ್ರಧಾನಿ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಅವರಿಗೆ ಸಂಪೂರ್ಣ ಕಾರ್ಯಾಚರಣೆಯ ಸ್ವಾತಂತ್ರ್ಯವಿದೆ ಎಂದು ಪ್ರಧಾನಿ ಹೇಳಿದ್ದಾರೆ.

