BREAKING : ರಾಜಸ್ಥಾನದ ನೂತನ ‘ಡಿಸಿಎಂ’ ಆಗಿ ಪ್ರೇಮ್ ಚಂದ್ ಭೈರವಾ , ದಿಯಾ ಕುಮಾರಿ ಆಯ್ಕೆ

ರಾಜಸ್ಥಾನ : :  ರಾಜಸ್ಥಾನದಲ್ಲಿ  2 ಡಿಸಿಎಂ ಹುದ್ದೆ ಸೃಷ್ಟಿಸಲಾಗಿದ್ದು,  ರಾಜಸ್ಥಾನದ ನೂತನ ಡಿಸಿಎಂ ಆಗಿ ಪ್ರೇಮ್ ಚಂದ್ ಭೈರವಾ , ದಿಯಾ ಕುಮಾರಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಘೋಷಿಸಿದೆ.

ರಜಪೂತ್ ಸಮುದಾಯದ ದಿಯಾ ಕುಮಾರಿ ಹಾಗೂ ದಲಿತ ಸಮುದಾಯದ ಪ್ರೇಮ್ ಚಂದ್ ಬೈರವಾ ಗೆ ಡಿಸಿಎಂ ಹುದ್ದೆ ನೀಡಲಾಗಿದೆ. ವಾಸುದೇವ ಖನಾನಿ ರಾಜಸ್ಥಾನದ ಸ್ಪೀಕರ್ ಆಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಆಯ್ಕೆಯಾಗಿದ್ದಾರೆ.ಭಾರತೀಯ ಜನತಾ ಪಕ್ಷ ಮಂಗಳವಾರ ರಾಜಸ್ಥಾನದ ಹೊಸ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರನ್ನು ನೇಮಕ ಮಾಡಿದೆ.ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಬಿಜೆಪಿ ವರಿಷ್ಠರು ಈಗ ಎಲ್ಲಾ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿಗಳನ್ನು ನೇಮಿಸಿದ್ದಾರೆ.

ರಾಜಸ್ಥಾನದ ಮುಂದಿನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ಘೋಷಿಸಿದೆ. ಸಂಗನೇರ್ ವಿಧಾನಸಭಾ ಕ್ಷೇತ್ರದಿಂದ ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ನ ಪುಷ್ಪೇಂದ್ರ ಭಾರದ್ವಾಜ್ ಅವರನ್ನು 48,081 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದರು. ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರ ಹೆಸರನ್ನು ಬಿಜೆಪಿಯ ವಸುಂಧರಾ ರಾಜೆ ಘೋಷಿಸಿದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read