ನವದೆಹಲಿ : ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.
ಇಂದು ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್, ‘ಮೋದಿ ಉಪನಾಮ’ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ನಿರಾಕರಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಗುಜರಾತ್ ಹೈಕೋರ್ಟ್ ಎತ್ತಿಹಿಡಿದಿದೆ.
2019 ರಲ್ಲಿ ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಕೋಲಾರದಲ್ಲಿ ರಾಹುಲ್ ಗಾಂಧಿ, ಮೋದಿ ಉಪನಾಮವನ್ನು ಬಳಸಿಕೊಂಡು ವಾಗ್ದಾಳಿ ನಡೆಸಿದ್ದರು. ಈ ಕುರಿತಂತೆ ಮಾನನಷ್ಟ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಸೂರತ್‌ನ ಜಿಲ್ಲಾ ನ್ಯಾಯಾಲಯವು ರಾಹುಲ್ ಗಾಂಧಿಯನ್ನು 2023ರ ಮಾರ್ಚ್ನಲ್ಲಿ ದೋಷಿ ಎಂದು ತೀರ್ಪು ನೀಡಿತ್ತು, ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ನಂತರ ಮಾರ್ಚ್ 24ರಂದು ರಾಹುಲ್ ಗಾಂಧಿಯನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿತ್ತು.
Gujarat High Court upholds Sessions Court's order denying stay on conviction of Rahul Gandhi in the defamation case against 'Modi surname' remark. pic.twitter.com/Qzw15PE0Ij
— ANI (@ANI) July 7, 2023

