BIG BREAKING : ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಬೆಂಗಳೂರು :   ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಟ, ನಿರ್ಮಾಪಕ ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ಇಂದು ಅವರು ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೃದಯಾಘಾತದಿಂದ ದ್ವಾರಕೀಶ್ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟ, ನಿರ್ದೇಶಕ, ನಿರ್ಮಾಪಕನಾಗಿ ಸಿನಿಮಾ ರಂಗಕ್ಕೆ ಕಾಲಿಟ್ಟ ನಟ ದ್ವಾರಕೀಶ್ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಸ್ಯಾಂಡಲ್ ವುಡ್ ಕುಳ್ಳ ಎಂದೇ ಫೇಮಸ್ ಆಗಿದ್ದ ದ್ವಾರಕೀಶ್ ಆಪ್ತಮಿತ್ರ ಸಿನಿಮಾದಲ್ಲಿ ನಟ ವಿಷ್ಣುವರ್ಧನ್ ಜೊತೆ ನಟಿಸಿ ಎಲ್ಲರ ಗಮನ ಸೆಳೆದಿದ್ದರು.

ದ್ವಾರಕೀಶ್ ಆಗಸ್ಟ್ ೧೯, ೧೯೪೨ರಂದು ಹುಣಸೂರು ನಲ್ಲಿ ಶಮಾರಾವ್ ಮತ್ತು ಜಯಮ್ಮರವರಿಗೆ ಜನಿಸಿದರು, ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. ೧೯೬೩ರಲ್ಲಿ, ಅವರು ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು.ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು.

 

 

 

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read