BIG BREAKING : ಅರಿಶಿನಗುಂಡಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿದ್ದ ಶರತ್ ಮೃತದೇಹ ಪತ್ತೆ

ಉಡುಪಿ : ಕೊಲ್ಲೂರಿನ ಅರಿಶಿನ ಗುಂಡಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿದ್ದ ಶರತ್ ಮೃತದೇಹ ಪತ್ತೆಯಾಗಿದೆ. ಶರತ್ ಮೃತದೇಹ 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗೆ ಸಿಲುಕಿತ್ತು.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಅರಿಶಿನಗುಂಡಿ ಜಲಪಾತದಲ್ಲಿ ಜಾರಿ ಬಿದ್ದು ಕಾಣೆಯಾಗಿರುವ ಯುವಕ ಭದ್ರಾವತಿ ಮೂಲದ ಶರತ್ ಕುಮಾರ್ (23) ಜಲಪಾತ ವೀಕ್ಷಣೆಗೆಗೆಂದು ಕೊಲ್ಲೂರು ಸಮೀಪದ ಅರಿಶಿನಗುಂಡಿ ಜಲಪಾತಕ್ಕೆ ಬಂದಿದ್ದನು. ಈ ವೇಳೆ ಜಲಪಾತ ವೀಕ್ಷಣೆ ಮಾಡುತ್ತಿದ್ದಾಗ ಜಾರಿಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ. ಸತತ 1 ವಾರಗಳ ನಿರಂತರ ಶೋಧ ಕಾರ್ಯದ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ.

ಯುವಕನ ಮೃತದೇಹ ಪತ್ತೆ ಮಾಡಲು ಹೋದ ಮುಳುಗು ತಜ್ಞರು, ಸೇರಿದಂತೆ ಹಲವು ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಳೆದ ವಾರದಿಂದ ಹಗಲು ರಾತ್ರಿ ಎನ್ನದೇ ಶೋಧ ಕಾರ್ಯಾಚರಣೆ ನಡೆಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read