BIG BREAKING : ನಾಳೆ ಬೆಂಗಳೂರಿನಲ್ಲೇ `ಸ್ಪಂದನಾ’ ಅಂತ್ಯಕ್ರಿಯೆ

ಬೆಂಗಳೂರು : ಹೃದಯಾಘಾತದಿಂದ ಮೃತಪಟ್ಟಂತಹ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಮೃತದೇಹ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು, ಬುಧವಾರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.

ನಾಳೆ ಮಧ್ಯಾಹ್ನ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಕ್ರಿಯೆ ನಡೆಯಲಿದ್ದು, ಮಧ್ಯಾಹ್ನದವರೆಗೆ ಶಿವರಾಂ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಇಂದು ರಾತ್ರಿ ಬೆಂಗಳೂರಿಗೆ ಪಾರ್ಥೀವ ಶರೀರ ಆಗಮಿಸಲಿದೆ, ಇದಕ್ಕಾಗಿ ವಿಶೇಷ ವಿಮಾನದ ವ್ಯವಸ್ಥೆ ಮಾಡಲಾಗಿದೆ.,ನಾಳೆ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಕನ್ನಡ ಚಿತ್ರರಂಗದ ನಟ, ನಿರೂಪಕ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಸಾವಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಥೈಲ್ಯಾಂಡ್ ಪ್ರವಾಸದಲ್ಲಿದ್ದ ಸ್ಪಂದನಾಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರುವ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read