ಬೆಂಗಳೂರು : 2024-25 ನೇ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶವು ಇಂದು ಪ್ರಕಟವಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಜಾಲತಾಣ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಟಿ ನಡೆಸುವ ಮೂಲಕ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು https://karresults.nic.in ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.
ಮಾರ್ಚ್ 1 ರಿಂದ 20ರವರೆಗೆ ರಾಜ್ಯದ 1771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯುಸಿ ಪರೀಕ್ಷೆಗೆ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ 25 ಸಾವಿರಕ್ಕೂ ಹೆಚ್ಚು ಮೌಲ್ಯಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದರು. ಏಪ್ರಿಲ್ 3ರ ವೇಳೆಗೆ ಮೌಲ್ಯಮಾಪನ ಪೂರ್ಣಗೊಳಿಸಿ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿಸಿದ್ದು, ಇಂದು ಫಲಿತಾಂಶ ಪ್ರಕಟಿಸಲಾಗಿದೆ.
ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಆನ್ಲೈನ್ನಲ್ಲಿ ಪರಿಶೀಲಿಸುವುದು ಹೇಗೆ?
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಪರಿಶೀಲಿಸಲು ಮತ್ತು ಡೌನ್ಲೋಡ್ ಮಾಡಲು ಕೆಳಗೆ ತಿಳಿಸಲಾದ ಹಂತಗಳನ್ನು ಅನುಸರಿಸಿ:
• https://karresults.nic.in/ ನಲ್ಲಿ ಅಧಿಕೃತ ವೆಬ್ಸೈಟ್ ತೆರೆಯಿರಿ
• ಪಿಯುಸಿ ಫಲಿತಾಂಶಗಳ ಕುರಿತು ಅಧಿಸೂಚನೆಯನ್ನು ಪರಿಶೀಲಿಸಿ (ಹೊಸ ವಿಂಡೋ ತೆರೆಯುತ್ತದೆ)
• ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ
• ನಿಮ್ಮ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು ಸಲ್ಲಿಸಿ ಮತ್ತು ಡೌನ್ಲೋಡ್ ಮಾಡಿ/ಮುದ್ರಿಸಿ