BIG NEWS:ವಿಮಾನದಲ್ಲೇ ಸಿಗರೇಟ್ ಸೇದಿದ ಇಬ್ಬರು ಪ್ರಯಾಣಿಕರು; ಅರೆಸ್ಟ್

ಬೆಂಗಳೂರು: ವಿಮಾನದಲ್ಲಿಯೇ ಸಿಗರೇಟ್ ಸೇದಿದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಪ್ರಯಾಣಿಕರನ್ನು ಬೆಂಗಳೂರು ಏರ್ ಪೋರ್ಟ್ ಪೊಲೀಸರು ಬಂಧಿಸಿದ್ದಾರೆ.

ಪ್ರವೀಣ್ ಕುಮಾರ್ ಹಾಗೂ ಶಹರಿ ಚೌದರಿ ಬಂಧಿತರು. ಪ್ರವೀಣ್ ಕುಮಾರ್ ಅಹಮದಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಆಕಾಶ್ ಏರ್ ವಿಮಾನದಲ್ಲಿ ನಿಯಮ ಉಲ್ಲಂಘಿಸಿ ಸಿಗರೇಟ್ ಸೇದಿದ್ದ.

ವಿಮಾನ ಕೆಐಎ ನಲ್ಲಿ ಬಂದಿಳಿಯುತ್ತಿದ್ದಂತೆ ಪ್ರವೀಣ್ ಕುಮಾರ್ ನನ್ನು ಏರ್ ಪೋರ್ಟ್ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕ ಶಹರಿ ಚೌದರಿ ಎಂಬಾತ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿದ್ದಾನೆ. ಮಧ್ಯ ರಾತ್ರಿ 1:30ರ ವೇಳೆ ಈ ಘಟನೆ ನಡೆದಿದೆ. ವಿಮಾನದ ಶೌಚಾಲಯದಲ್ಲಿ ಹೊಗೆ ಹಾಗೂ ಸಿಗರೇಟ್ ವಾಸನೆ ಬಂದ ಹಿನ್ನೆಲೆಯಲ್ಲಿ ವಿಮಾನದ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪ್ರಯಾಣಿಕ ಸಿಗರೇಟ್ ಸೇದಿರುವುದು ಬೆಳಕಿಗೆ ಬಂದಿದೆ.

ವಿಮಾನ ಬೆಂಗಳೂರಿಗೆ ಬರುತ್ತಿದ್ದಂತೆ ವಿಮಾನ ಸಿಬ್ಬಂದಿಗಳು ಪ್ರಯಾಣಿಕನನ್ನು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಏರ್ ಪೋರ್ಟ್ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read