HomeKarnatakaBIG NEWS: ಅಣ್ಣ-ತಮ್ಮಂದಿರಂತಿದ್ದ ಸಂಬಂಧಕ್ಕೆ ಯಾರೋ ಹುಳಿ ಹಿಂಡಿದರು; ಇಂದು ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್...

BIG NEWS: ಅಣ್ಣ-ತಮ್ಮಂದಿರಂತಿದ್ದ ಸಂಬಂಧಕ್ಕೆ ಯಾರೋ ಹುಳಿ ಹಿಂಡಿದರು; ಇಂದು ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಎಂದ ಶಾಸಕ ಎಸ್.ಆರ್. ಶ್ರೀನಿವಾಸ್

ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಇಂದು ಜೆಡಿಎಸ್ ಗೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಆರ್. ಶ್ರೀನಿವಾಸ್, ನಾನು ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಣ್ಣ-ತಮ್ಮಂದಿರಂತೆ ಇದ್ದೆವು. ಅಣ್ಣ-ತಮ್ಮಂದಿರಂತಿದ್ದ ಸಂಬಂಧಕ್ಕೆ ಒಂದೂವರೆ ವರ್ಷದ ಹಿಂದೆ ಯಾರೋ ಹುಳಿ ಹಿಂಡಿದರು. ಸುಮಾರು ಎರಡು ದಶಕಗಳ ಕಾಲ ಪಕ್ಷಕ್ಕಾಗಿ ದುಡಿಯುವ ಅವಕಾಶ ಕೊಟ್ಟ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರಿಗೆ ಧನ್ಯವಾದ ಹೇಳುತ್ತೇನೆ ಎಂದರು.

ಬೆಳಿಗ್ಗೆ 11 ಗಂಟೆಗೆ ಕಾಂಗ್ರೆಸ್ ಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಎಸ್.ಆರ್. ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ನಿನ್ನೆ ಗುಬ್ಬಿ ಕ್ಷೇತ್ರದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ರಾಜೀನಾಮೆ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular