HomeKarnatakaBIG NEWS: ಅಧಿಕಾರಿಗಳು ತಪ್ಪು ಮಾಡಿದ್ದಾರೆ ಅದಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ; ಗೃಹ ಸಚಿವ ಅರಗ...

BIG NEWS: ಅಧಿಕಾರಿಗಳು ತಪ್ಪು ಮಾಡಿದ್ದಾರೆ ಅದಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ; ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಐಎ ಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಸೇರಿದಂತೆ ಮೂವರು ಅಧಿಕಾರಿಗಳ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಐಎಎಸ್, ಐಪಿಎಸ್ ಅಧಿಕಾರಿಗಳು ಸಮಾಜಕ್ಕೆ ಮಾದರಿಯಾಗಿ ಕೆಲಸ ಮಾಡಬೇಕು. ಅದನ್ನು ಬಿಟ್ಟು ಈ ರೀತಿ ಕಿತ್ತಾಡುವುದಲ್ಲ ಎಂದು ಗರಂ ಆಗಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಉತ್ತಮ ಹುದ್ದೆಯಲ್ಲಿರುವ ಅಧಿಕಾರಿಗಳು ಈ ರೀತಿ ಕಿತ್ತಾಟ ನಡೆಸಿದರೆ ಹೇಗೆ? ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಅದಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಅಧಿಕಾರಿಗಳು ತಪ್ಪು ಮಾಡಿದ್ದಾರೆ ಎನಿಸುತ್ತಿದೆ. ಹಾಗಾಗಿ ಮೂವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಕರಣದ ಬಗ್ಗೆ ತನಿಖೆ ನಡೆಯಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular