ಬೆಂಗಳೂರು: ವಿಪಕ್ಷ ನಾಯಕರ ಮಹಾಮೈತ್ರಿ ಕೂಟ ಸಭೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೊಳಗಾದ ಕಾಂಗ್ರೆಸ್ ಪಕ್ಷವು, ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಘಟಬಂಧನಕ್ಕೆ ಬಂದ ಹೊರ ರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳುಹಿಸಿದ ಕಾಂಗ್ರೆಸ್ ಸರ್ಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.
ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ’ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ರಾಜಕೀಯ ಆಡಳಿತ ವಸಾಹತುಶಾಹಿಯನ್ನು ದೇಶಕ್ಕೆ ಪರಿಚಯಿಸಿದೆ ಎಂದು ಆರೋಪಿಸಿದ್ದಾರೆ.
ಅಲ್ಲದೇ 135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ಕಾಂಗ್ರೆಸ್ ದರ್ಪ ತೋರುತ್ತಿದೆ. ಸತ್ಯಯುಗದಲ್ಲಿ ಹಿರಣ್ಯಕಶಿಪುವು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://twitter.com/hd_kumaraswamy/status/1681128726082514945
https://twitter.com/hd_kumaraswamy/status/1681128726082514945
https://twitter.com/hd_kumaraswamy/status/1681128729404387329
https://twitter.com/hd_kumaraswamy/status/1681128732529164289
https://twitter.com/hd_kumaraswamy/status/1681128735800725504
https://twitter.com/hd_kumaraswamy/status/1681128739479113730