BIG NEWS: ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಬಾಬುರಾವ್ ಚಿಂಚನಸೂರು

ಬೆಂಗಳೂರು; ಬಿಜೆಪಿ ನಾಯಕ ಬಾಬುರಾವ್ ಚಿಂಚನಸೂರು ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಬಾಬುರಾವ್ ಚಿಂಚನಸೂರ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ ಡಿ.ಕೆ.ಶಿವಕುಮಾರ್ ಚಿಂಚನಸೂರ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚಿಂಚನಸೂರ ಇಂದು ಕಾಂಗ್ರೆಸ್ ಗೆ ಬಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಅನುಕೂಲವಾಗಲಿದೆ. ಹೀಗಾಗಿ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ದೇವರು ವರವನ್ನೂ ನೀಡಲ್ಲ, ಶಾಪವನ್ನೂ ನೀಡಲ್ಲ, ಅವಕಾಶಗಳನ್ನು ನೀಡುತ್ತಾನೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read