BIG NEWS: ಅನಗತ್ಯವಾಗಿ ಮೈಮೇಲೆ ಸಮಸ್ಯೆ ಎಳೆದುಕೊಳ್ಳಬೇಡಿ; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಶಾಸಕನ ಸಲಹೆ

ಹುಬ್ಬಳ್ಳಿ: ಪಿಎಫ್ಐ, ಎಸ್  ಡಿ ಪಿ ಐ ಜೊತೆ ಬಜರಂಗದಳ, ಆರ್ ಎಸ್ ಎಸ್ ಹೋಲಿಕೆ ಮಾಡಿ ಅನಗತ್ಯವಾಗಿ ಮೈಮೇಲೆ ಸಮಸ್ಯೆ ಎಳೆದುಕೊಳ್ಳಬೇಡಿ ಎಂದು ಹುಬ್ಬಳ್ಳಿ-ಧಾರವಾಡ ಕೇಂದ್ರ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.

ಆರ್ ಎಸ್ ಎಸ್ ಬ್ಯಾನ್ ಮಾಡಲು ಹಿಂದೇಟು ಹಾಕಲ್ಲ ಎಂದು ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿರುವ ಶಾಸಕರು, ಕರ್ನಾಟಕ ರಾಜ್ಯದ ಜನತೆ ನಿಮಗೆ ಬಹುಮತ ಕೊಟ್ಟಿದ್ದಾರೆ. ಚುನಾವಣೆ ವೇಳೆ ನೀವು ನೀಡಿರುವ ಗ್ಯಾರಂಟಿ ಬಗ್ಗೆ ಮಾತನಾಡಿ. ಅದನ್ನು ಬಿಟ್ಟು ಅನಗತ್ಯ ಹೇಳಿಕೆ ಕೊಡುವುದು ಬೇಡ ಎಂದಿದ್ದಾರೆ.

10 ಕೆಜಿ ಅಥವಾ 15 ಕೆಜಿ ಅಕ್ಕಿ ಕೊಡುತ್ತೀರೋ, ವಿದ್ಯುತ್ ಕೊಡುತ್ತೀರೋ ಹೇಳಿ. ಗ್ಯಾರಂಟಿ ಯೋಜನೆ ಜಾರಿ ಮಾಡದೇ ವಿಷಯಾಂತರ ಮಾಡಲು ಪ್ರಯತ್ನಿಸಬೇಡಿ. ಬಜರಂಗದಳ, ಆರ್ ಎಸ್ ಎಸ್ ನಿಷೇಧಿಸುತ್ತೇವೆ ಎನ್ನುವುದು ಸರಿಯಲ್ಲ. ರಾಜ್ಯದ ಜನತೆ ನಿಮಗೆ ನೀಡಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read