HomeKarnatakaBIG NEWS: ಅನವಶ್ಯಕ ವಿಚಾರಗಳ ಬಗ್ಗೆ ಚರ್ಚೆ ಬೇಡ; ರೋಹಿಣಿ ಭ್ರಷ್ಟಾಚಾರದ ಬಗ್ಗೆ ಚರ್ಚೆಯಾಗಲಿ ಎಂದ...

BIG NEWS: ಅನವಶ್ಯಕ ವಿಚಾರಗಳ ಬಗ್ಗೆ ಚರ್ಚೆ ಬೇಡ; ರೋಹಿಣಿ ಭ್ರಷ್ಟಾಚಾರದ ಬಗ್ಗೆ ಚರ್ಚೆಯಾಗಲಿ ಎಂದ ಡಿ.ರೂಪಾ

ಬೆಂಗಳೂರು: ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ಆಡಿಯೋ ವೈರಲ್ ವಿಚಾರವಾಗಿ ಮತ್ತೊಂದು ಪೋಸ್ಟ್ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ, ಅನವಶ್ಯಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ರೋಹಿಣಿ ಸಿಂಧೂರಿ ಭ್ರಷ್ಟಾಚಾರದ ಬಗ್ಗೆ ಮಾತ್ರ ಚರ್ಚೆಯಾಗಲಿ ಎಂದು ಹೇಳಿದ್ದಾರೆ.

ಕೌಟುಂಬಿಕ ಹಾಗೂ ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚೆ ಬೇಡ. ಗಂಗರಾಜು ವಿರುದ್ಧವೂ ಕ್ರಿಮಿನಲ್ ಕೇಸ್ ಗಳಿವೆ. ಗಂಗರಾಜುಗೆ ಭ್ರಷ್ಟಾಚಾರದ ವಿರುದ್ಧ ಹೋರಾಡಬೇಡ ಎಂದು ನಾನು ಹೇಳಿಲ್ಲ ಎಂದು ಹೇಳಿದ್ದಾರೆ.

ರೋಹಿಣಿ ಸಿಂಧೂರಿ ಐ ಎ ಎಸ್ ಅಧಿಕಾರಿಯಾಗಿದ್ದುಕೊಂಡು ಸಾಕಷ್ಟು ಮನೆ ಹಾಳು ಮಾಡಿದ್ದಾರೆ. ಇದು ವೈಯಕ್ತಿಕವಾದ ವಿಚಾರವೇ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular