HomeKarnatakaBIG NEWS: ಅನ್ನಭಾಗ್ಯ ಯೋಜನೆಗೆ ದಶಕದ ಸಂಭ್ರಮ; ಇಂದಿನಿಂದ ಫಲಾನುಭವಿಗಳ ಖಾತೆಗೆ ಹೆಚ್ಚುವರಿ 5 ಕೆಜಿ...

BIG NEWS: ಅನ್ನಭಾಗ್ಯ ಯೋಜನೆಗೆ ದಶಕದ ಸಂಭ್ರಮ; ಇಂದಿನಿಂದ ಫಲಾನುಭವಿಗಳ ಖಾತೆಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ವರ್ಗಾವಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆ ಜಾರಿಗೆ ಇದೀಗ ದಶಕದ ಸಂಭ್ರಮ ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 10 ಕೆಜಿ ಅಕ್ಕಿ ಬದಲಾಗಿ ಇಂದು ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿಯ ಹಣ ವಿತರಣೆ ಮಾಡಲಿದೆ.

2013ರಲ್ಲಿ ಅನ್ನಭಾಗ್ಯ ಅಕ್ಕಿ ಯೋಜನೆಯನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದರು. ಮೇ 13ರಂದು ಐತಿಹಾಸಿಕ ಅನ್ನಭಾಗ್ಯ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜುಲೈ ತಿಂಗಳಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬಂದಿತು. ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಸುಮಾರು 1.08 ಕೋಟಿ ಕುಟುಂಬಗಳು ಯೋಜನೆ ಲಾಭ ಪಡೆಯುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಸಿಗುವವರೆಗೂ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಕೆಜಿ ಅಕ್ಕಿಗೆ 34 ರೂ. ನಂತೆ 170 ರೂಪಾಯಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುವುದಾಗಿ ತಿಳಿಸಿದೆ. ಈ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular