HomeKarnatakaBIG NEWS: ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಸರಿಯಲ್ಲ; ಮನೆ ಯಜಮಾನಿಗೆ 2 ಸಾವಿರ ಹಣ ಹಾಕುವುದು...

BIG NEWS: ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಸರಿಯಲ್ಲ; ಮನೆ ಯಜಮಾನಿಗೆ 2 ಸಾವಿರ ಹಣ ಹಾಕುವುದು ನನ್ನ ಜವಾಬ್ದಾರಿ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಬೆಳಗಾವಿ: ನಮ್ಮ ಪಕ್ಷದ ನಾಯಕರು ನನಗೆ ಸಚಿವ ಸ್ಥಾನ ನೀಡಿದ್ದಾರೆ. ಕಷ್ಟ ಬರಲಿ, ಸುಖ ಬರಲಿ ಮನೆ ಮಗಳಂತೆ ಕೆಲಸ ಮಾಡುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನನ್ನ ಕ್ಷೇತ್ರದ ಪ್ರತಿಯೊಬ್ಬರಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಮನೆ ಮಗಳಾಗಿ ಜವಾಬ್ದಾರಿ ನಿಭಾಯಿಸಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆ ಯಜಮಾನಿಗೆ ಹಣ ನೀಡುವ ಯೋಜನೆ ನನ್ನ ಇಲಾಖೆಯಲ್ಲಿದೆ. ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಶೀಘ್ರ ಆರಂಭವಾಗಲಿದೆ. ಮನೆ ಯಜಮಾನಿ ಖಾತೆಗೆ 2 ಸಾವಿರ ಹಣ ಹಾಕುವುದು ನನ್ನ ಜವಾಬ್ದಾರಿ. ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು ಎಂಬುದು ಸಿಎಂ ಸಿದ್ದರಾಮಯ್ಯನವರ ಕನಸು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular