BIG NEWS: ಅಮಿತ್ ಶಾ ಭಾಷಣ ವಿಶ್ವದ 8ನೇ ಅದ್ಭುತ; ಮಾಜಿ ಸಿಎಂ H.D ಕುಮಾರಸ್ವಾಮಿ ವ್ಯಂಗ್ಯ

ಶಿವಮೊಗ್ಗ: ಮೂರುವರೆ ವರ್ಷ ಏನೂ ಮಾಡದೇ ಈಗ ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳುತ್ತಿದ್ದಾರೆ. ಬಿಜೆಪಿ ಮಾಡಿದ ಭ್ರಷ್ಟಾಚಾರವನ್ನು ಮುಕ್ತ ಮಾಡ್ತಾರಾ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿಯ ಹುಂಚದಕಟ್ಟೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಅಮಿತ್ ಶಾ ಅವರ ಭಾಷಣ ವಿಶ್ವದ 8ನೇ ಅಧ್ಭುತ. ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇನೆ ಎಂದು ಹೇಳಿದ್ದಾರೆ. ಆಡಳಿತ ಮಾಡಿದ ಮೂರುವರೆ ವರ್ಷ ಏನು ಮಾಡಿದರು? ಎಂದು ಪ್ರಶ್ನಿಸಿದರು.

ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಷ್ಟು ದಿನ ಮೋದಿ, ಅಮಿತ್ ಶಾ ಮುಖ ನೋಡಿ ಮತ ಹಾಕಿ ಅಂತಿದ್ದವರು ಈಗ ಯಡಿಯೂರಪ್ಪನವರಿಗೆ ನಿವೃತ್ತಿ ಕೊಟ್ಟು ಯಡಿಯೂರಪ್ಪನವರ ಮುಖ ನೋಡಿ ಬಿಜೆಪಿಗೆ ಮತ ಹಾಕಿ ಎನ್ನುತ್ತಿದ್ದಾರೆ. ನಾನು ಡಿ ಎನ್ ಎ ವಿಚಾರ ಹೇಳಿದ್ದಕ್ಕೆ ಈಗ ಯಡಿಯೂರಪ್ಪ ಹೆಸರನ್ನು ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಜೆಡಿಎಸ್ ಅಧಿಕಾರಕ್ಕೆ ಬಂದರೆ ಶರಾವತಿ ನಿರಾಶ್ರಿತರಿಗೆ ಶಾಶ್ವತ ಪರಿಹಾರ ನೀಡುತ್ತೇವೆ. ವಿ ಐ ಎಸ್ ಎಲ್ ಕಾರ್ಖಾನೆ ಪುನಶ್ಚೇತನಕ್ಕೆ ರಾಜ್ಯ ಸರ್ಕಾರದಿಂದಲೇ ಯೋಜನೆ ಜಾರಿ ಮಾಡುತ್ತೇವೆ. ಉಳಿದ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read