
ಅಮುಲ್ ಉತ್ಪನ್ನಗಳು ರಾಜ್ಯದಲ್ಲಿ ಹೆಚ್ಚು ಮಾರಾಟವಾಗುತ್ತಿರುವ ಬಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಅಮುಲ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
ಅಮುಲ್ ವಿಚಾರದಲ್ಲಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ವೃದ್ಧಿಗೆ ಮತ್ತಷ್ಟು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

