HomeKarnatakaBIG NEWS: ಅಳಿಯನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಶಾಸಕ

BIG NEWS: ಅಳಿಯನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಶಾಸಕ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಟಿಕೆಟ್ ಕೈ ತಪ್ಪಿದ ಆಕಾಂಕ್ಷಿಗಳು ಕಾಂಗ್ರೆಸ್ ವಿರುದ್ಧ ಅಸಮಧಾನ‌ ಹೊರಹಾಕಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ.

ತುಮಕೂರು ನಗರ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಳಿಯ ಎಸ್.ರಫೀಕ್ ಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಷಫಿ ಅಹ್ಮದ್ ರಾಜಿನಾಮೆ ನೀಡಿದ್ದಾರೆ.

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಷಫಿ ಅಹ್ಮದ್, ಅಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ ಎಂದು ಕಿಡಿಕಾರಿದ್ದಾರೆ. ಇಕ್ಬಾಲ್ ಅಹ್ಮದ್ ಗೆ ಟಿಕೆಟ್ ನೀಡಿರುವ ಹೈಕಮಾಂಡ್ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಷಫಿ ಅಹ್ಮದ್ ಎರಡು ಬಾರಿ ಹಾಗೂ ಅವರ ಅಳಿಯ ರಫೀಕ್ ಒಂದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಈ ಬಾರಿ ಕಾಂಗ್ರೆಸ್ ಯುವ ಮುಖಂಡ ಇಕ್ಬಾಲ್ ಅಹ್ಮದ್ ಗೆ ಟಿಕೆಟ್ ಘೋಷಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular