
ರಾಮನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಮಾಗಡಿ ಕ್ಷೇತ್ರದಲ್ಲಿ ಕೆಲವರು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಅವರನ್ನು ಮಾಗಡಿ ರಂಗನಾಥಸ್ವಾಮಿಯೆ ನೋಡಿಕೊಳ್ಳುತ್ತಾನೆ ಎಂದು ಪರೋಕ್ಷವಾಗಿ ಬಾಲಕೃಷ್ಣ ವಿರುದ್ಧ ವಾಗ್ದಾಳಿ ನಡೆಸಿದರು.
ಆರ್ಥಿಕವಾಗಿ ಇದ್ದರೆ ನಾವು 150-160 ಸ್ಥಾನಗಳನ್ನು ಗೆಲ್ಲುತ್ತಿದ್ದೆವು. ಈ ಚುನಾವಣೆಯಲ್ಲಿ 80-90 ಕ್ಷೇತ್ರಗಳಲ್ಲಿ ಗೆಲ್ಲುವುದು ಗ್ಯಾರಂಟಿ. ಕಾಂಗ್ರೆಸ್ ಹಾಗೂ ಬಿಜೆಪಿಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತೇವೆ. ಪಂಚರತ್ನ ಯೋಜನೆಗಳನ್ನು ಜಾರಿಗೊಳಿಸಬೇಕೆಂದರೆ ಜೆಡಿಎಸ್ ಗೆ ಮತ ನೀಡಿ ಎಂದು ಹೇಳಿದರು.

