BIG NEWS: ಅಸಭ್ಯವಾಗಿ ಮಾತನಾಡುವ ಚಟ ಬಿಡಬೇಕು; ರಮೇಶ್ ಜಾರಕಿಹೊಳಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ; ಎಚ್ಚರಿಕೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವರ್ಚಸ್ಸು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಜನ ಎಲ್ಲವನ್ನು ನೋಡುತ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ಎಂ ಎಲ್ ಸಿ ಚನ್ನರಾಜ ಹಟ್ಟಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ರಮೇಶ್ ಜಾರಕಿಹೊಳಿ ಆರೋಪವನ್ನು ತೀವ್ರವಾಗಿ ಖಂಡಿಸುತ್ತೇನೆ. ಇತ್ತೀಚಿನ ದಿನಗಳಲ್ಲಿ ರಮೇಶ್ ಜಾರಕಿಹೊಳಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೀಳು ಮಟ್ಟದ ಹೇಳಿಕೆಗಳನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ. ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿಗೆ ಸೇರಲು ರಮೇಶ್ ಜಾರಕಿಹೊಳಿ ಆಹ್ವಾನ ನೀಡಿದ್ದರು. ಆದರೆ ಅದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಒಪ್ಪಲಿಲ್ಲ. ಈ ಕಾರಣಕ್ಕೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿದ್ದು ರಮೇಶ್ ಜಾರಕಿಹೊಳಿಯಲ್ಲ, ಅವರು ಸ್ವಂತ ಬಲದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಕುಗ್ಗಿಸಲು ರಮೇಶ್ ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ರಮೇಶ್ ಜಾರಕಿಹೊಳಿ ತಾವು ಮಾಡಿದ ಅಪರಾಧವನ್ನು ನಮ್ಮ ಮೇಲೆ ತಿರುಗಿಸುವ ಯತ್ನ ಮಾಡುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಅಸಭ್ಯವಾಗಿ ಮಾತನಾಡುವ ಚಟ ಬಿಡಬೇಕು. ಇಲ್ಲದಿದ್ದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read