BIG NEWS: ಆಜಾನ್ ಬಗ್ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಮಂಗಳೂರು: ಕಾವೂರಿನ ಶಾಂತಿನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ವೇಳೆ ಮಾಜಿ ಸಚಿವ ಈಶ್ವರಪ್ಪ ಭಾಷಣದ ಸಂದರ್ಭದಲ್ಲಿ ಮಸೀದಿಯಲ್ಲಿ ಆಜಾನ್ ಪ್ರಾರ್ಥನೆ ಆರಂಭವಾಗಿದೆ. ಇದರಿಂದ ಗರಂ ಆದ ಈಶ್ವರಪ್ಪ ನಾನು ಎಲ್ಲಿ ಹೋದರೂ ಇದೊಂದು ತಲೆನೋವು ಎಂದು ಕಿಡಿಕಾರಿದ್ದಾರೆ.

ವಿಜಯಸಂಕಲ್ಪ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದ ಕೆ.ಎಸ್.ಈಶ್ವರಪ್ಪ, ನಾನು ಎಲ್ಲಿಗೆ ಹೋದರು ಇದೊಂದು ತಲೆ ನೋವು. ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕೇಳೋದಾ ಅವನಿಗೆ ಕಿವುಡಾ? ಎಂದು ಪ್ರಶ್ನಿಸುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶವಿದ್ದರೂ ಈ ರೀತಿ ಮಾಡುವುದು ಸರಿಯಲ್ಲ. ಇಂದಲ್ಲ ನಾಳೆ ಸಮಸ್ಯೆ ಇತ್ಯರ್ಥ ಆಗಲಿದೆ. ಎಲ್ಲಾ ಧರ್ಮದವರಿಗೂ ಗೌರವ ಕೊಡಬೇಕು ಎಂದು ಪ್ರಧಾನಿ ಮೋದಿ ಹೇಳ್ತಾರೆ. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರ ಅಲ್ಲಾಗೆ ಕೇಳೋದಾ? ನಮ್ಮ ದೇವಸ್ಥಾನಗಳಲ್ಲಿಯೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಧರ್ಮವನ್ನು ಉಳಿಸುವ ದೇಶ ನಮ್ಮದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read