HomeKarnatakaBIG NEWS: ಆರ್ಥಿಕ ಜ್ಞಾನವಿಲ್ಲದೇ ಉಚಿತ ವಿದ್ಯುತ್ ಘೋಷಣೆ; ಸಿದ್ದರಾಮಯ್ಯ ವಿರುದ್ಧ ಅರುಣ್ ಸಿಂಗ್ ವಾಗ್ದಾಳಿ

BIG NEWS: ಆರ್ಥಿಕ ಜ್ಞಾನವಿಲ್ಲದೇ ಉಚಿತ ವಿದ್ಯುತ್ ಘೋಷಣೆ; ಸಿದ್ದರಾಮಯ್ಯ ವಿರುದ್ಧ ಅರುಣ್ ಸಿಂಗ್ ವಾಗ್ದಾಳಿ

ಬೆಂಗಳೂರು: ಬಿಜೆಪಿಯಲ್ಲಿ ಇರುವಂತಹ ಸಂಘಟನೆ ಬೇರಾವ ಪಕ್ಷದಲ್ಲಿಯೂ ಇಲ್ಲ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಅಧಿಕಾರ ಸ್ಥಾಪಿಸಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಇಂತಹ ಸಂಘಟನೆ, ಕಾರ್ಯಕರ್ತರು ಇರಲು ಸಾಧ್ಯವಿಲ್ಲ. ಯಡಿಯೂರಪ್ಪನವರಂತಹ ನಾಯಕ ಸಿಕ್ಕಿದ್ದು ನಮ್ಮ ಪುಣ್ಯ. ಚುನಾವಣೆಯಲ್ಲಿ ನಾವು ಅತಿ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್ ನಲ್ಲಿ ಹುದ್ದೆಗಾಗಿ ಕಿತ್ತಾಟ ನಡೆಯುತ್ತಿದೆ. ಪಕ್ಷ ಬಿಟ್ಟು ಹಲವರು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ. ಓಲೈಕೆ ರಾಜಕಾರಣವೇ ಅವರ ಆಸ್ತಿ. ಬಾಯಿಗೆ ಬಂದಂತೆ ಸಿದ್ದರಾಮಯ್ಯ ಹಾಗೂ ಡಿ,ಕೆ.ಶಿವಕುಮಾರ್ ಘೋಷಣೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಆರ್ಥಿಕ ಜ್ಞಾನವಿಲ್ಲ. ಉಚಿತ ವಿದ್ಯುತ್ ಘೋಷಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular