BIG NEWS: ಆ ಇಬ್ಬರು ನಾಯಕರಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ; ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬಾಗಲಕೋಟೆ: ಲಿಂಗಾಯಿತರಿಗೆ ಅವಮಾನ ಮಾಡಿದ ಪಕ್ಷಕ್ಕೆ ಹೋಗಿರುವ ಆ ಇಬ್ಬರು ನಾಯಕರಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ರ್ಯಾಲಿ ನಡೆಸಿದ ಅಮಿತ್ ಶಾ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ, ಲಿಂಗಾಯಿತರಿಗೆ ಅಪಮಾನ ಮಾಡಿದ ಪಕ್ಷಕ್ಕೆ ಸೇರಿದ್ದಾರೆ. ಆ ಇಬ್ಬರು ನಾಯಕರಿಂದ ಕಾಂಗ್ರೆಸ್ ಗೆ ಯಾವುದೆ ಲಾಭವಿಲ್ಲ. ಲಿಂಗಾಯಿತ ಮುಖ್ಯಮಂತ್ರಿಗಳನ್ನು ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ. ಆದರೆ ಬಿಜೆಪಿ ಯಡಿಯೂರಪ್ಪ ನವರನ್ನು ಮುಖ್ಯಮಂತ್ರಿಯನ್ನಾಗಿಸಿತು. ಜೆಡಿಎಸ್ ನವರು ಯಡಿಯೂರಪ್ಪನವರಿಗೆ ಮೋಸ ಮಾಡಿದರು ಎಂದು ಗುಡುಗಿದ್ದಾರೆ.

ಜೆಡಿಎಸ್ ಎಷ್ಟೇ ಸೀಟ್ ಗೆದ್ದರೂ ಕಾಂಗ್ರೆಸ್ ಜೊತೆ ಕೈ ಜೋಡಿಸಿ ಹೋಗುತ್ತಾರೆ. ಹಾಗಾಗಿ ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವನ್ನು ನೀಡಿ ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read