BIG NEWS: ಇಂತಹದ್ದು ಯಾವ ನಾಯಕರಿಗೂ ಆಗಬಾರದು; ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ನಡೆಸಿಕೊಂಡ ರೀತಿ ಸರಿಯಿಲ್ಲ. ಇದು ಬಿಜೆಪಿಯ ದುರುದ್ದೇಶ ಎಂಬುದು ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಗೆ ಬರಮಾಡಿಕೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್ ಓರ್ವ ಸ್ವಾಭಿಮಾನಿ ರಾಜಕಾರಣಿ. ಓರ್ವ ಮಾಜಿ ಸಿಎಂ ಆಗಿದ್ದವರಿಗೆ ಬಿಜೆಪಿ ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ. ಹಿಂದೆ ಬಿ.ಎಸ್.ಯಡಿಯೂರಪ್ಪನವರಿಗೂ ಬಲವಂತವಾಗಿ ರಾಜೀನಾಮೆ ಕೊಡಿಸಿದರು. ಈಗ ಶೆಟ್ಟರ್ ಅವರನ್ನು ಪಕ್ಷದಿಂದ ಹೊರ ಹಾಕಿದ್ದಾರೆ. ಇಂತಹದ್ದು ಯಾವ ನಾಯಕನಿಗೂ ಆಗಬಾರದು. ಇದು ಬಿಜೆಪಿ ದುರುದ್ದೇಶ ಎಂದು ಗರಂ ಆದರು.

ಬಿಜೆಪಿಯಲ್ಲಿ ಸ್ವಾರ್ಥಕ್ಕಾಗಿ ಶೆಟ್ಟರ್ ಅವರನ್ನು ಬಲಿ ಕೊಟ್ಟಿದ್ದಾರೆ. ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಗುಡುಗಿದರು. ಜಗದೀಶ್ ಶೆಟ್ಟರ್ ಕೇವಲ ಉತ್ತರ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ರಾಜ್ಯದ ನಾಯಕರು. ಅವರನ್ನು ಆತ್ಮೀಯವಾಗಿ ಕಾಂಗ್ರೆಸ್ ಗೆ ಸ್ವಾಗತಿಸುತ್ತೇನೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read