BIG NEWS: ಇಂದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ – ಉಪ ಮೇಯರ್ ಚುನಾವಣೆ; ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು

ಇಂದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಆಯ್ಕೆಗಾಗಿ ಚುನಾವಣೆ ನಡೆಯಲಿದ್ದು, ಜೆಡಿಎಸ್ ನೆರವಿನೊಂದಿಗೆ ಅಧಿಕಾರ ಹಿಡಿಯಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದ್ದರೆ, ಸ್ವಂತ ಬಲದ ಮೇಲೆ ಅಧಿಕಾರಕ್ಕೇರಲು ಬಿಜೆಪಿ ಕಸರತ್ತು ಮಾಡುತ್ತಿದೆ.

ಇಂದು ಬೆಳಗ್ಗೆ 10 ರಿಂದ 10:30 ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿರಲಿದ್ದು, 12 ಗಂಟೆ ಬಳಿಕ ಮತದಾನ ನಡೆಯಲಿದೆ. ಪಾಲಿಕೆಯಲ್ಲಿ ಕಾಂಗ್ರೆಸ್ 27, ಬಿಜೆಪಿ 23, ಜೆಡಿಎಸ್ 4 ಹಾಗೂ ಓರ್ವ ಪಕ್ಷೇತರ ಸದಸ್ಯರಿದ್ದು, ಇತರೆ ಚುನಾಯಿತ ಪ್ರತಿನಿಧಿಗಳಿಗೂ ಸಹ ಮತದಾನ ಅವಕಾಶವಿರುವ ಕಾರಣ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ.

ಮೇಯರ್ – ಉಪಮೇಯರ್ ಸ್ಥಾನ ಪಡೆಯಲು ಮ್ಯಾಜಿಕ್ ನಂಬರ್ 35 ಆಗಿದ್ದು, ಕಾಂಗ್ರೆಸ್ ನಾಯಕರು ಜೆಡಿಎಸ್ ಸದಸ್ಯರು ಬೆಂಬಲಿಸುವ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಜೆಡಿಎಸ್ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದ್ದು, ಅವರು ಕೂಡ ಕಾಂಗ್ರೆಸ್ ಬೆಂಬಲಿಸಲು ತನ್ನ ಸದಸ್ಯರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರಿನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ನಡೆಸುತ್ತಿದ್ದು, ತನ್ನ 23 ಸದಸ್ಯರ ಜೊತೆಗೆ ವಿಧಾನಸಭೆ, ವಿಧಾನ ಪರಿಷತ್ ಹಾಗೂ ಲೋಕಸಭಾ ಸದಸ್ಯರು ಸಹ ಬೆಂಬಲಿಸುವ ಕಾರಣ ಅಧಿಕಾರ ತನಗೆ ಸಿಗಬಹುದು ಎಂಬ ವಿಶ್ವಾಸದಲ್ಲಿದೆ. ಹೀಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆದಿದ್ದು, ತೀವ್ರ ಕುತೂಹಲ ಕೆರಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read