BIG NEWS: ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ; ಅಗತ್ಯ ವಸ್ತುಗಳ ಸಾಗಾಣಿಕೆಯಲ್ಲಿ ವ್ಯತ್ಯಯ ಸಾಧ್ಯತೆ

ವಾಣಿಜ್ಯ ವಾಹನಗಳ ಎಫ್‌ಸಿ ನವೀಕರಣಕ್ಕೆ ಕ್ಯೂಆರ್ ಕೋಡ್ ಹೊಂದಿರುವ ರೆಟ್ರೋ ರಿಫ್ಲೆಕ್ಟರ್ ಟೇಪ್ ಅಳವಡಿಸಿಕೊಂಡು ಬರಲು ಹೊರಡಿಸಿರುವ ಸರ್ಕಾರದ ಆದೇಶವನ್ನು ವಿರೋಧಿಸಿ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರುಗಳ ಸಂಘ ಇಂದು ಮಧ್ಯರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿದೆ.

ಅಲ್ಲದೆ ಬೆಂಗಳೂರು ನಗರದಲ್ಲಿ ಸರಕು ಸಾಗಾಣೆ ವಾಹನಗಳ ಪ್ರವೇಶ ರದ್ದುಪಡಿಸಿರುವುದನ್ನು ಸಂಘ ಖಂಡಿಸಿದ್ದು, ಈ ಕಾರಣಕ್ಕಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಿಂದಾಗಿ ಇಂದು ಮಧ್ಯರಾತ್ರಿಯಿಂದ ಸರಕು ಸಾಗಾಣಿಕೆ ವಾಹನಗಳು ರಸ್ತೆಗಿಳಿಯದ ಕಾರಣ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಹಾಲು, ತರಕಾರಿ, ಹಣ್ಣು ಮೊದಲಾದವುಗಳ ಸಾಗಾಣಿಕೆ ಮೇಲೆ ಈ ಮುಷ್ಕರ ಪರಿಣಾಮ ಬೀರುವ ಕಾರಣ ಜನಸಾಮಾನ್ಯರ ದೈನಂದಿನ ಜೀವನಕ್ಕೆ ಅಡಚಣೆಯಾಗಬಹುದು. ಇದರ ಮಧ್ಯೆ ಮುಷ್ಕರ ಆರಂಭಕ್ಕೂ ಮುನ್ನವೇ ಮುಷ್ಕರ ನಿರತರ ಬೇಡಿಕೆ ಈಡೇರಿಕೆಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುತ್ತದಾ ಎಂಬುದನ್ನು ಕಾದು ನೋಡಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read