BIG NEWS: ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದು, ಮೇ 20 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾಗಾಂಧಿ ಭವನದಲ್ಲಿ ನೂತನವಾಗಿ ಆಯ್ಕೆಯಾಗಿರುವ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸತ್ ಸದಸ್ಯರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.

ಈ ಸಭೆಯಲ್ಲಿ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಸರ್ವಾನು ಮತದಿಂದ ಅಂಗೀಕರಿಸಲಾಗುತ್ತದೆ. ಇಂದಿನ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕರು ಸಹ ಉಪಸ್ಥಿತರಿರಲಿದ್ದಾರೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read