BIG NEWS: ಇದು ಕುತಂತ್ರಿಗಳ ಕೃತ್ಯ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದು ದೂರು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸಿದ್ದರಾಮಯ್ಯ ಹೆಸರಲ್ಲಿ ಹರಿದಾಡುತ್ತಿರುವ ನಕಲಿ ಪತ್ರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇದು ಕುತಂತ್ರಿಗಳ ಕೃತ್ಯ ಎಂದು ಹೇಳಿದ್ದಾರೆ.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನನ್ನ ಹೆಸರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಯಾರೋ ಪತ್ರವೊಂದನ್ನು ಕಳುಹಿಸಿದ್ದಾರೆ. ಇದು ಕುತಂತ್ರಿಗಳ ಕೃತ್ಯ. ನಾನು ಬರೆದ ಪತ್ರವಲ್ಲ ಎಂದು ಸ್ಪಷ್ಟ ಪಡಿಸಿದರು.

ನನ್ನ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯವುಂಟುಮಾಡಲು ಆರ್.ಎಸ್.ಎಸ್. ನಂತಹ ಕುತಂತ್ರಿಗಳು ಈ ರೀತಿ ನಕಲಿ ಪತ್ರವನ್ನು ರವಾನಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿಯಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಜನರು ನಂಬಬಾರದು, ತಿರಸ್ಕರಿಸಬೇಕು. ಈ ಬಗ್ಗೆ ನಾನು ಚುನಾವಣಾ ಆಯೋಗಕ್ಕೆ ಹಾಗೂ ಪೊಲೀಸರಿಗೆ ದೂರು ನೀಡುತ್ತಿದ್ದೇನೆ. ಈ ನಕಲಿ ಪತ್ರದ ಹಿಂದಿರುವವರು ಯಾರು ಎಂಬುದನ್ನು ಪತ್ತೆ ಮಾಡಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.

https://twitter.com/siddaramaiah/status/1655830354291310592

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read