
ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನನ್ನ ಹೆಸರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಯಾರೋ ಪತ್ರವೊಂದನ್ನು ಕಳುಹಿಸಿದ್ದಾರೆ. ಇದು ಕುತಂತ್ರಿಗಳ ಕೃತ್ಯ. ನಾನು ಬರೆದ ಪತ್ರವಲ್ಲ ಎಂದು ಸ್ಪಷ್ಟ ಪಡಿಸಿದರು.
ನನ್ನ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯವುಂಟುಮಾಡಲು ಆರ್.ಎಸ್.ಎಸ್. ನಂತಹ ಕುತಂತ್ರಿಗಳು ಈ ರೀತಿ ನಕಲಿ ಪತ್ರವನ್ನು ರವಾನಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿಯಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಜನರು ನಂಬಬಾರದು, ತಿರಸ್ಕರಿಸಬೇಕು. ಈ ಬಗ್ಗೆ ನಾನು ಚುನಾವಣಾ ಆಯೋಗಕ್ಕೆ ಹಾಗೂ ಪೊಲೀಸರಿಗೆ ದೂರು ನೀಡುತ್ತಿದ್ದೇನೆ. ಈ ನಕಲಿ ಪತ್ರದ ಹಿಂದಿರುವವರು ಯಾರು ಎಂಬುದನ್ನು ಪತ್ತೆ ಮಾಡಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.
ನಾಡಿನ ಮಹಾಜನತೆಯಲ್ಲಿ ಮನವಿ,
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನನ್ನ ಹೆಸರಿನಲ್ಲಿ ನಕಲಿ ಪತ್ರವೊಂದನ್ನು ಬರೆದಿದ್ದಾರೆ. ಇದು ನಾನು ಬರೆದ ಪತ್ರ ಅಲ್ಲವೇ ಅಲ್ಲ. ಕೆಲವು ಕುತಂತ್ರಿಗಳು ನಕಲಿ ಪತ್ರವನ್ನು ಸೃಷ್ಟಿಮಾಡಿ ನನಗೆ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ನಡುವೆ ಭಿನ್ನಾಭಿಪ್ರಾಯಗಳನ್ನು ಉಂಟುಮಾಡಲು… pic.twitter.com/KSdYN7lpzK
— Siddaramaiah (@siddaramaiah) May 9, 2023

