HomeKarnatakaBIG NEWS: ಈ ಬಾರಿಯೂ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ ಶಾಮನೂರು ಶಿವಶಂಕರಪ್ಪ

BIG NEWS: ಈ ಬಾರಿಯೂ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ ಶಾಮನೂರು ಶಿವಶಂಕರಪ್ಪ

ಈಗಾಗಲೇ 91 ವರ್ಷ ದಾಟಿರುವ ದಾವಣಗೆರೆ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ, ಚುನಾವಣಾ ರಾಜಕೀಯದಿಂದ ತಾವು ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತೇನೆ ಎಂದಿದ್ದಾರೆ.

ಭಾನುವಾರದಂದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ ಪ್ರಯುಕ್ತ ದೇವಾಲಯಕ್ಕೆ ಭೇಟಿ ನೀಡಿದ ಅವರು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

1994 ರಿಂದಲೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಇದು ನನಗೆ ಆರನೇ ಚುನಾವಣೆಯಾಗಿದ್ದು, ಹೈಕಮಾಂಡ್ ಟಿಕೆಟ್ ಅಂತಿಮಗೊಳಿಸುತ್ತದೆ. ನಂತರ ಪ್ರಚಾರ ಕಾರ್ಯ ಆರಂಭಿಸುವುದಾಗಿ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮಾಡಾಳ್ ವಿರೂಪಾಕ್ಷಪ್ಪ ಅವರ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂಬ ಗಾದೆ ಮಾತಿನಂತೆ ಅಪರಾಧ ಮಾಡಿದ್ದರೆ ಶಿಕ್ಷೆಯಾಗಲೇಬೇಕು ಎಂದು ಮಾರ್ಮಿಕವಾಗಿ ನುಡಿದರು.

For Latest News Updates, Join Our Whatsapp Community🚩
RELATED ARTICLES

Most Popular