BIG NEWS: ಈ ಬಾರಿ ಡಿ.ಕೆ. ಶಿವಕುಮಾರ್ ಗೆ ಸಿಎಂ ಆಗಲು ಅವಕಾಶ ನೀಡಲಿ; ನಂಜಾವಧೂತ ಸ್ವಾಮೀಜಿ

ಬೆಂಗಳೂರು: ಡಿ.ಕೆ. ಶಿವಕುಮಾರ್ ಅತ್ಯಂತ ಬದ್ಧತೆ, ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಸಾಕಷ್ಟು ಸಂಕಷ್ಟಗಳ ನಡುವೆಯೂ ಪಕ್ಷ ಸಂಘಟನೆ ಮಾಡಿದ್ದಾರೆ. ಹಾಗಾಗಿ ಈ ಬಾರಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ.

ಬೆಂಗಳೂರಿನ ಆದಿಚುಂಚನಗಿರಿ ಮಠದ ಸಭಾಭವನದಲ್ಲಿ ನಡೆದ ಒಕ್ಕಲಿಗ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ನಂಜಾವಧೂತ ಸ್ವಾಮೀಜಿ, ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದರು. ಅವರು ಸಿಎಂ ಆಗಿದ್ದ ವೇಳೆ ಉತ್ತಮವಾಗಿ ಆಡಳಿತ ನಡೆಸಿದ್ದರು. ರಾಜ್ಯದ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದರು. ನಂತರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಪ್ರತಿ ಬಾರಿ ಕುಮಾರಸ್ವಾಮಿಯವರಿಗೆ ನಾವು ಬೆಂಬಲ ಕೊಟ್ಟಿದ್ದೇವೆ. ಹಾಗಾಗಿ ಈ ಬಾರಿ ಡಿ.ಕೆ. ಶಿವಕುಮಾರ್ ಅವರಿಗೆ ಅವಕಾಶ ನೀಡಲಿ ಎಂಬುದು ನಮ್ಮ ಅಭಿಮತ ಎಂದರು.

ಪಕ್ಷದ ಸಂಪ್ರದಾಯದಂತೆ ಕೆಪಿಸಿಸಿ ಅಧ್ಯಕ್ಷರಾದವರು ಸಿಎಂ ಆಗಬೇಕು. ಹಾಗಾಗಿ ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read