HomeKarnatakaBIG NEWS : ಈ ವರ್ಷವೇ ‘ಪಠ್ಯಪುಸ್ತಕ ಪರಿಷ್ಕರಣೆ’ : ಸಚಿವ ಮಧು...

BIG NEWS : ಈ ವರ್ಷವೇ ‘ಪಠ್ಯಪುಸ್ತಕ ಪರಿಷ್ಕರಣೆ’ : ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ (School textbook revise)ಗೆ ರಾಜ್ಯ ಸರ್ಕಾರ (State Government) ಮುಂದಾಗಿದ್ದು, ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ ರಚನೆಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ, ಮಕ್ಕಳು ತಪ್ಪು ತಪ್ಪು ಓದಬಾರದು. ಆದ್ದರಿಂದ ಮುಂದಿನ ವರ್ಷದವರೆಗೆ ಕಾಯಲ್ಲ, ತಜ್ಞರು ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ಸರ್ಕಾರ ಈ ಸಂಬಂಧ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಸದ್ಯದಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ (textbook revise) ಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಶಾಲಾ ಪಠ್ಯದಲ್ಲಿ ಲೋಪದೋಷಗಳನ್ನು ಸರಿಪಡಿಸುವಂತ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಶಾಲಾ ಪಠ್ಯಪುಸ್ತಕಗಳಲ್ಲಿ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡಗೇವಾರ್, ಚಿಂತಕ ಚಕ್ರವರ್ತಿ ಸೂಲಿಬೆಲೆ ಮತ್ತು ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯಗಳನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ರೋಹಿತ್ ಚಕ್ರತೀರ್ಥ ಸಮಿತಿಯ ನೇತೃತ್ವದಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿತ್ತು. ಹೊಸ ಪಠ್ಯಪುಸ್ತಕಗಳಲ್ಲಿ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡಗೇವಾರ್, ಚಿಂತಕ ಚಕ್ರವರ್ತಿ ಸೂಲಿಬೆಲೆ ಮತ್ತು ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯಗಳನ್ನು ಸೇರಿಸಲಾಗಿತ್ತು. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ (Congress Govt) ಈ ಪಠ್ಯಗಳಿಗೆ ಕತ್ತರಿ ಹಾಕಲು ಮುಂದಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular