HomeIndiaBIG NEWS: ಎರಡು ರೈಲುಗಳ ನಡುವೆ ಭೀಕರ ಅಪಘಾತ; ಹಳಿ ತಪ್ಪಿದ 12 ಬೋಗಿಗಳು

BIG NEWS: ಎರಡು ರೈಲುಗಳ ನಡುವೆ ಭೀಕರ ಅಪಘಾತ; ಹಳಿ ತಪ್ಪಿದ 12 ಬೋಗಿಗಳು

ಕೋಲ್ಕತ್ತಾ: ಬಾಲಸೋರ್ ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತ ದುರಂತ ಮಾಸುವ ಮುನ್ನ ಅಂತದ್ದೇ ಮತ್ತೊಂದು ಅಪಘಾತ ಸಂಭವಿಸಿದ್ದು, ಎರಡು ಗೂಡ್ಸ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಪಶ್ಚಿಮ ಬಂಗಾಳದ ಓಂಡಾ ರೈಲು ನಿಲ್ದಾಣದ ಬಳಿ ನಡೆದಿದೆ.

ಗೂಡ್ಸ್ ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಗೆ ಪ್ರವೇಶಿಸಿದೆ. ಹಳಿಯಲ್ಲಿದ್ದ ಮತ್ತೊಂದು ಸರಕು ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 12 ಬೋಗಿಗಳು ಹಳಿ ತಪ್ಪಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈಲು ಅಪಘಾತ ಹಿನ್ನೆಲೆಯಲ್ಲಿ ಖರಗ್ ಪುರ-ಬಂಕುರಾ-ಆದ್ರಾ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular