BIG NEWS: ಎರಡೂ ರಾಷ್ಟ್ರೀಯ ಪಕ್ಷಗಳು ಒಂದೇ ನಾಣ್ಯದ 2 ಮುಖಗಳು; ರಾಜ್ಯದಲ್ಲಿ ಲೂಟಿ ನಡೆಯುತ್ತಿದ್ರೆ ಸ್ಫೂರ್ತಿ ಉಂಟು ಮಾಡ್ತಾರಂತೆ; HDK ವಾಗ್ದಾಳಿ

ಹಾಸನ: ಬಿಜೆಪಿ, ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಣ ಲೂಟಿ ಮಾಡುತ್ತಿವೆ ಎರಡೂ ಪಕ್ಷಗಳು ಒಂದೇ ನಾಣ್ಯದ 2 ಮುಖಗಳಿದ್ದಂತೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲೇ ನಿರತವಾಗಿವೆ. ಜೆಡಿಎಸ್ ಬಗ್ಗೆ ಮಾತನಾಡಲು 2 ಪಕ್ಷಗಳ ಬಳಿ ಸರಕಿಲ್ಲ ಎಂದಿದ್ದಾರೆ.

ಉತ್ತರ ಕರ್ನಾಟಕ ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಕೊಡುಗೆ ಏನಿದೆ? ಮೂಲಸೌಕರ್ಯಗಳ ಸಮಸ್ಯೆಯಿಂದ ಅಲ್ಲಿನ ಜನ ನರಳುತ್ತಿದ್ದಾರೆ. ಆದಾಗ್ಯೂ ಸರ್ಕಾರ ಯಾವುದೇ ಸಮಸ್ಯೆಗೆ ಸ್ಪಂದಿಸಿಲ್ಲ. ಮಾಡಾಳ್ ಪುತ್ರನ ಮನೆಯಲ್ಲಿ ಕೋಟ್ಯಂತರ ಹಣ ಪತ್ತೆಯಾಯಿತು. ಈ ಬಗ್ಗೆ ಸಿಎಂ ಬೊಮ್ಮಾಯಿ ಏನು ಹೇಳ್ತಾರೆ? ರಾಜ್ಯದಲ್ಲಿ ಲೂಟಿ ನಡೆಯುತ್ತಿದ್ರೆ ಸ್ಫೂರ್ತಿ ಉಂಟುಮಾಡ್ತಾರಂತೆ. ಕಳಸಾ ಬಂಡೂರಿ ಯೋಜನೆಗೆ ಹಣ ಎಲ್ಲಿ ಇಟ್ಟಿದ್ದಾರಂತೆ ಮೊದಲು ಹೇಳಲಿ. ಅಭಿವೃದ್ಧಿ ಯೋಜನೆ ಹೆಸರಲ್ಲಿ ಹಣ ಲೂಟಿ ಮಾಡುತ್ತಿದ್ದಾರೆ. ಹಾಗತ ಅವರದ್ದೇ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. ಶಾಸಕ ಯತ್ನಾಳ್ ಕೂಡ ಸರ್ಕಾರದ ವಿರುದ್ಧ ಹಲವು ಆರೋಪ ಮಾಡಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸುವ ಬದಲು ಲೂಟಿ ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read